1ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ,
2ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು,
3ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು.
4ಏಕೆಂದರೆ ನೀನು ಹಟವಾದಿ
5ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು
6ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
7ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು,
8ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ;
9ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
10ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
11ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?
12ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು,
13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು,
14ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು?
15ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
16ನನ್ನ ಬಳಿಗೆ ಬಂದು ಇದನ್ನು ಕೇಳಿರಿ,
17ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
18ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು!
19ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು.
20ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ!
21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ;
22“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.