1ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ!
2ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ.
3ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
4ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ.
5ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು.
6ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ,
7ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ,
8ಇದೇ ಯೆಹೋವನ ನುಡಿ,
9ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು.
10ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ.
11ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.
12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್49:12 ಸೀನೀಮ್ ಅಥವಾ ಅಸ್ವಾನ್ ದೇಶದಿಂದ ಬರುತ್ತಿದ್ದಾರೆ.
13ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ!
14ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.
15ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
16ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
17ನಿನ್ನ ಮಕ್ಕಳು49:17 ನಿನ್ನ ಮಕ್ಕಳು ಅಥವಾ ನಿನ್ನನ್ನು ಪುನಃ ಕಟ್ಟುವವರು. ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.
18ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ,
19ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ.
20ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು,
21ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು?
22ಕರ್ತನಾದ ಯೆಹೋವನು ಹೀಗೆನ್ನುತ್ತಾನೆ,
23ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು.
24ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
25ಯೆಹೋವನು ಹೀಗೆನ್ನುತ್ತಾನೆ,
26ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು.