1ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು
2ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು,
3ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ,
4ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು?
5ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ.
6ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು.
7ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ,
8ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು,
9ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ,
10ಏಕೆಂದರೆ ಹತ್ತು ಎಕರೆ5:10 ಎಕರೆ ಎಕರೆ ಎಂದು ಭಾಷಾಂತರಿಸಲ್ಪಟ್ಟಿರುವ ಹೀಬ್ರೂ ಪದದ ಅಕ್ಷರಶಃವಾದ ಅರ್ಥವು ಒಂದು ದಿನದಲ್ಲಿ ಒಂದು ಜೋಡಿ ಎತ್ತುಗಳು ಉಳುವಷ್ಟು ಪ್ರದೇಶವಾಗಿದೆ. ಇದು ಆಧುನಿಕ ಕಾಲದ ಎಕರೆಯ ಅಳತೆ ಅಲ್ಲ. ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ5:10 ಕೊಳಗದಷ್ಟೇ ಬತ್ ಅಂದರೆ 22 ಲೀಟರ್. ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ 5:10 ಖಂಡುಗ ಹೋಮೆರ್ 220 ಲೀಟರ್ ಏಫಾ 22 ಲೀಟರ್ಬೀಜದಿಂದ ಕಡಿಮೆ ದವಸವು ಬರುವುದು.
11ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು,
12ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು.
13ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ.
14ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು,
15ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
16ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
17ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.5:17 ಕುರಿಮರಿಗಳು ಅಲ್ಲಿ ಮೇಯುವವು. ಅಂದರೆ ಇತರ ಜನರು ತಿನ್ನುವರು.
18ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ.
20ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ;
21ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
22ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
23ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
24ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ,
25ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು.
26ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು.
27ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ.
28ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ.
29ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ.
30ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು.