1ಯೆಹೋವನು ಹೀಗೆನ್ನುತ್ತಾನೆ,
2ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ?
3ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.”
4ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
5ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ.
6ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು.
7ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ;
8ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ.
9ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು?
10ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು?
11ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ,