1ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ,
2ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ
3ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ,
4“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ!
5ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು,
6ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ.
7ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ,
8ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು.
9ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ!
10ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ,
11ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
12ನಾನೇ, ನಾನೇ ನಿನ್ನನ್ನು ಸಂತೈಸುವವನು.
13ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ?
14ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು,
15ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,
16ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ,
17ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,
18ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ.
19ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ?
20ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ.
21ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ.
22ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ,
23ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು.