We Believe JesusFé, Esperança e Nova Vida

ಯೆಶಾ 52

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 51 ಯೆಶಾ ಯೆಶಾ 53 →

1ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ!

2ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ!

3ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು,

4ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು.

5ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ

6ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು.

7ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!

8ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.

9ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ!

10ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ.

11ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ,

12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ.

13ಇಗೋ, ನನ್ನ ಸೇವಕನು ಕೃತಾರ್ಥನಾಗುವನು.

14ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ,

15ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.

← ಯೆಶಾ 51 ಯೆಶಾ ಯೆಶಾ 53 →

ಯೆಶಾ 52 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ