1“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು!
2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ;
3ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.
4“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು;
5“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ;
6ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
7“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
8ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು,
9“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
10ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
11ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ,
12ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ,
13ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
14ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
15ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ;
16ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ,
17ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.