1“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!
2ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?
3ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ;
4ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ,
5ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ,
6ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
7ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
8ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
9ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
10ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ,
11ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
12ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ;
13ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು;