1ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ;
2ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು,
3ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ;
4ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
5ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು
6ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ
7ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು;
8ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ,
9ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
10ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ;
11ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು.
12“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ;