1ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ,
2ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;
3ಮಾಟಗಾತಿಯ ಮಕ್ಕಳೇ,
4ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ?
5ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು,
6ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು;
7ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.
8ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ;
9ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ57:9 ಪರರಾಜನ ಅಥವಾ ಮೊಲೆಕೆಂಬ ವಿಗ್ರಹ. ಬಳಿಗೆ ಪ್ರಯಾಣಮಾಡಿದ್ದಿ;
10ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ;
11ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ?
12ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
13ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ.
14“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ;
15ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ,
16ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,
17ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು,
18ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,
19ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,
20ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ;
21“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.