1ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
2ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
3ಆಗ ಒಬ್ಬನು ಮತ್ತೊಬ್ಬನಿಗೆ,
4ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
5ಆಗ ನಾನು,
6ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
7ನನ್ನ ಬಾಯಿಗೆ ಮುಟ್ಟಿಸಿ,
8ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
9ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ,
10ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ,
11ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು,
12ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
13ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು.