1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
2ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
3ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
4ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು,
5ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
6ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು;
7ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು;
8ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ.61:8 ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ಅಥವಾ ಕೊಳ್ಳೆ ಹೊಡೆದ ವಸ್ತುಗಳೊಂದಿಗೆ ಅರ್ಪಿಸುವ ಯಜ್ಞವನ್ನು ದ್ವೇಷಿಸುತ್ತೇನೆ
9ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು.
10ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
11ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ,