We Believe JesusFé, Esperança e Nova Vida

ಯೆಶಾ 63

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 62 ಯೆಶಾ ಯೆಶಾ 64 →

1ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ,

2ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?

3ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ.

4ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು;

6ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ,

7ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು,

8“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.

9ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು;

10ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

11ಆಗ ಆತನ ಜನರು63:11 ಆತನ ಜನರು ಆತನು ಅಥವಾ ದೇವರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

12ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ

13ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.

14ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು;

15ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು;

16ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ;

17ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ?

18ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು;

19ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.63:19 ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ. ಪುರಾತನ ಕಾಲದಿಂದಲೂ ನಾವು ನಿನ್ನ ಜನರಾಗಿದ್ದೇವೆ.

← ಯೆಶಾ 62 ಯೆಶಾ ಯೆಶಾ 64 →

ಯೆಶಾ 63 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ