We Believe JesusFé, Esperança e Nova Vida

ಯೆಶಾ 64

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 63 ಯೆಶಾ ಯೆಶಾ 65 →

1ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ!

2ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ,

3ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!

4ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ,

5ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ;

6ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ;

7ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ;

8ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;

9ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.

10ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.

11ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ,

12ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ?

← ಯೆಶಾ 63 ಯೆಶಾ ಯೆಶಾ 65 →

ಯೆಶಾ 64 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ