We Believe JesusFé, Esperança e Nova Vida

ಯೆಶಾ 65

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 64 ಯೆಶಾ ಯೆಶಾ 66 →

1“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,

2ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.

3ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.

4ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ,

5ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ,

6ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;

7ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.

8ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ,

9ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು,

10ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ,

11ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ,

12ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ;

13ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ;

14ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು,

15ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು;

16ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ

17“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;

18ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ;

19ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು.

20ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ;

21ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

22ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು;

23ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು.

24ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

25ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು.

← ಯೆಶಾ 64 ಯೆಶಾ ಯೆಶಾ 66 →

ಯೆಶಾ 65 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ