1ಯೆಹೋವನು ಹೀಗೆನ್ನುತ್ತಾನೆ:
2ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು.
3ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ;
4ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು;
5ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ!
6ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ!
7ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.
8ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು?
9“ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ.
10ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ,
11ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ.
12ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ,
13ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು;
14ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು;
15ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು;
16ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು;
17ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು,
18“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
19ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
20ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
21ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.
22“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
23ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ,
24“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು;