1ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್8:1 ಮಹೇರ್ ಶಾಲಾಲ್ ಹಾಷ್ ಬಜ್ ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ. ’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
2ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.
3ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
4ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.
5ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,
6“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ,
7ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು.
8ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು.
9ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ;
10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ.
11ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,
12“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ;
13ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
14ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ8:14 ಎರಡು ಮನೆತನಕ್ಕೆ ಇಸ್ರಾಯೇಲ್ ಮತ್ತು ಯೆಹೂದ. ಎಡವುವ ಕಲ್ಲೂ,
15ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”
16ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
17ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
18ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ
19“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
20ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
21ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು
22ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ,