1ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ.
2ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು.
3ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ.
4ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ,
5ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ,
6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
7ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು.
8ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
9ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
10“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
11ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
12ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು.
13ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
14ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
16ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ.
18ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ,
19ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ.
20ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ.
21ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ.