1ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು,
2“ಹೌದು, ನೀವೇ ಮನುಷ್ಯರು;
3ನಿಮ್ಮ ಹಾಗೆ ನನಗೂ ಬುದ್ಧಿಯುಂಟು,
4ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ!
5ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ;
6ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು,
7ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು;
8ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು;
9ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ
10ಪ್ರತಿ ಪ್ರಾಣಿಯ ಪ್ರಾಣವು,
11ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ
12ಜ್ಞಾನವು ವೃದ್ಧರಲ್ಲೇ ಅಡಗಿದೆಯೋ?
13ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು,
14ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು,
15ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ;
16ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು;
17ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು,
18ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು
19ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು,
20ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ,
21ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ
22ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು
23ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು,
24ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ,
25ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು;