1ಆಗ ಯೋಬನು ಪುನಃ ಇಂತೆಂದನು,
2“ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ,
3ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ
4ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.
5ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು
6ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ
7ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ.
8ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ,
9ನನ್ನ ಘನತೆಯನ್ನು ಸುಲಿದುಬಿಟ್ಟು,
10ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು.
11ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ
12ಆತನ ದಂಡುಗಳು ಒಟ್ಟಿಗೆ ಮುಂದುವರೆದು
13ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ,
14ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ,
15ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ,
16ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ,
17ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ,
18ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ,
19ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ;
20ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ,
21ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ!
22ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ?
23ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು!
24ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು,
25ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು,
26ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ,
27ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು,
28ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ,
29ಕತ್ತಿಗೆ ಭಯಪಡಿರಿ,