1ಆಗ ಯೋಬನು ಇಂತೆಂದನು,
2“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ;
3ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ!
4ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು
5ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು
6ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ?
7ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು.
8ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ,
9ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು,
10ಆತನಾದರೋ ನನ್ನ ದಾರಿಯನ್ನು ಬಲ್ಲನು,
11ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ,
12ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ,
13ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು?
14ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ,
15ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ;
16ನನ್ನ ಹೃದಯವನ್ನು ಕುಂದಿಸಿದವನು ದೇವರೇ,
17ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ,