1ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,
2“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ,
3ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ,
4ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ,
5ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ.
6ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು.
7ನನ್ನ ಹಗೆಗೆ ದುಷ್ಟನ ಗತಿಯಾಗಲಿ,
8ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ,
9ಅವನಿಗೆ ಶ್ರಮೆ ಬರಲು,
10ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು,
11ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ;
12ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ;
13ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ,
14ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು,
15ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು,
16ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು,
17ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು.
18ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ,
19ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು,
20ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು,
21ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು,
22ಆ 27:22 ಅಥವಾ ದೇವರುಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು,
23ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ,