1ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
2ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
3ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
4ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
5ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.
6ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು;
7ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ,
8ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು,
9ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.
10ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ,
11ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು;
12ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು;
13‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ,
14ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ;
15ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು,
16ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ,
17ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು,
18ನನ್ನಲ್ಲಿ ಮಾತುಗಳು ತುಂಬಿವೆ,
19ಆಹಾ, ದ್ರಾಕ್ಷಾರಸವನ್ನು ತುಂಬಿ,
20ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು.
21ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು,
22ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ;