1ಆಮೇಲೆ ಎಲೀಹು ಮತ್ತೆ ಹೀಗೆಂದನು,
2“ಸ್ವಲ್ಪ ತಾಳು, ನಾನು ತಿಳಿಸುತ್ತೇನೆ,
3ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ,
4ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ,
5ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ,
6ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.
7ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ,
8ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು,
9ಆತನು ಅವರ ದುಷ್ಕೃತ್ಯವನ್ನೂ,
10ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು,
11ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ,
12ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು,
13ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು,
14ಯೌವನದಲ್ಲೇ ಸಾಯುವರು.
15ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು,
16ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ,
17ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ,
18ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ!
19ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ,
20ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ,
21ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ.
22ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು,
23ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು?
24ಮನುಷ್ಯರು ಕೀರ್ತಿಸುವ,
25ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ;
26ಆಹಾ, ದೇವರು ಮಹೋನ್ನತನಾಗಿದ್ದಾನೆ,
27ನೀರಿನ ಹನಿಗಳನ್ನು ಎಳೆದುಕೊಳ್ಳುವನು,
28ಮೋಡಗಳು ಅದನ್ನು ಸುರಿಸಿ
29ಆಹಾ, ಮೇಘಗಳ ಹರಡುವಿಕೆಯನ್ನೂ,
30ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು,
31ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ,
32ಕೈತುಂಬಾ ಸಿಡಿಲನ್ನು ಹಿಡಿದು
33ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು,