1ಇದಲ್ಲದೆ ಯೆಹೋವನು ಯೋಬನಿಗೆ,
2“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ?
3ಆಗ ಯೋಬನು ಯೆಹೋವನಿಗೆ ಉತ್ತರವಾಗಿ,
4“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ?
5ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು;
6ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
7“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು,
8ನನ್ನ ನೀತಿಯನ್ನು ಖಂಡಿಸಿಬಿಡುವಿಯಾ?
9ನಿನ್ನ ಕೈಯೂ, ದೇವರ ಕೈಯೂ ಸಮವೋ?
10ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು
11ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ,
12ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ,
13ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ,
14ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
15ನಿನ್ನಂತೆ ನನ್ನ ಸೃಷ್ಟಿಯಾಗಿರುವ 40:15 ಮೂಲತಃ ಬೆಹೆಮೋತ್ ಅಂದರೆ ದೈತ್ಯಕಾರದ ಮೃಗ.ನೀರಾನೆಯನ್ನು ನೋಡು;
16ಇಗೋ, ಅದರ ಬಲವು ಸೊಂಟದಲ್ಲಿಯೂ,
17ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು;
18ಅದರ ಮೂಳೆಗಳು ತಾಮ್ರದ ನಳಗಳಂತೆಯೂ,
19ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು.
20ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು;
21ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ,
22ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು,
23ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ.
24ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ?