1ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ?
2ಅದರ ಮೂಗಿಗೆ ಗಾಳವನ್ನು ಇಡುವೆಯೋ?
3ಅದು ನಿನ್ನ ಬಳಿ ವಿಜ್ಞಾಪಿಸುವುದೋ?
4ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ,
5ಅದನ್ನು ಪಕ್ಷಿಯಂತೆ ಆಡಿಸುವೆಯಾ?
6ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ?
7ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ
8ಅದರ ಮೇಲೆ ಕೈಹಾಕಿ ನೋಡು!
9ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ!
10ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ;
11ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು?
12ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ
13ಅದರ ಹೊರಕವಚವನ್ನು ಯಾರು ತೆಗೆಯುವರು?
14ಮುಖದ ಕದಗಳನ್ನು ಯಾರು ತೆರೆದಾರು?
15ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ.
16ಗಾಳಿಯು ಕೂಡ ನುಗ್ಗದಂತೆ
17ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ.
18ಅದರ ಸೀನಿನ ತುಂತುರುಗಳು ತಳತಳಿಸುವವು,
19ಬಾಯೊಳಗಿಂದ ಕೊಳ್ಳಿಗಳು ಹೊರಡುವವು,
20ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ
21ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.
22ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.
23ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
24ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
25ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.
26ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು;
27ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ
28ಬಿಲ್ಲು ಅದನ್ನು ಓಡಿಸಲಾರದು,
29ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು;
30ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ,
31ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು;
32ಸಾಗರಕ್ಕೆ ನರೆ ಬಂತೋ ಎಂಬಂತೆ
33ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ,
34ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು,