1ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ.
2ನಾನು ಸಂಜೆಯನ್ನು ಬಯಸುವ ದಾಸನಂತೆಯೂ,
3ಬೇಸರಿಕೆಯ ಮಾಸಗಳೂ,
4ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು;
5ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ.
6ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ,
7ನನ್ನ ಜೀವವು ಗಾಳಿಯಂತೆ ಇದೆಯೆಂತಲೂ,
8ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ,
9ಮೋಡ ಹರಿದು ಮಾಯವಾಗುವಂತೆ,
10ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ,
11ನಾನಂತೂ ಬಾಯಿಮುಚ್ಚುವುದಿಲ್ಲ;
12ನೀನು ನನ್ನ ಮೇಲೆ ಕಾವಲಿಡುವುದೇಕೆ?
13ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು,
14ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ,
15ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ,
16ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ.
17ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು?
18ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು,
19ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ?
20ಮನುಷ್ಯರ ಮೇಲೆ ಕಾವಲಿಡುವವನೇ,
21ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ?