1ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ 1:1 1 ಥೆಸ. 1:4; 2 ಥೆಸ. 2:13:ದೇವರಲ್ಲಿ ಪ್ರಿಯರಾದವರಿಗೆ, 1:1 ಯೋಹಾ 17:11, 15; 1 ಥೆಸ. 5:23:ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
2ನಿಮಗೆ 1:2 2 ಯೋಹಾ 3:ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.
3ಪ್ರಿಯರೇ, 1:3 ತೀತ. 1:4:ನಮಗೆ 1:3 ಅಥವಾ, ಹಂಚಿಕೊಳ್ಳುವ. ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು 1:3 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27:ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು 1:4 ತೀತ. 1:16; 2 ಪೇತ್ರ. 2:1; 1 ಯೋಹಾ 2:22:ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. 1:4 1 ಪೇತ್ರ. 2:8:ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
5ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು 1:5 2 ಪೇತ್ರ. 1:12:ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ 1:5 ಅರಣ್ಯ 14:29, 37; 26:64, 65; ಕೀರ್ತ 106:26; ಇಬ್ರಿ. 3:17-19:ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
6ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ 1:6 2 ಪೇತ್ರ. 2:4. ಪ್ರಕ 20:2:ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
71:7 ಆದಿ 19:24:ಸೊದೋಮ್ ಗೊಮೋರ ಪಟ್ಟಣಗಳವರೂ, 1:7 ಆದಿ 10:19; 14:2, 8; ಧರ್ಮೋ 29:23; ಹೋಶೇ. 11:8:ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, 1:7 2 ಪೇತ್ರ. 2:10. ಸಲಿಂಗಕಾಮಿಗಳಾಗಿದ್ದರು. ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
8ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
9ಆದರೂ 1:9 1 ಥೆಸ. 4:16:ಪ್ರಧಾನ ದೇವದೂತನಾದ 1:9 ದಾನಿ. 10:13; 12:1; ಪ್ರಕ 12:7:ಮೀಕಾಯೇಲನು 1:9 ಧರ್ಮೋ 34:6:ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, 1:9 2 ಪೇತ್ರ. 2:11:ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, 1:9 ಜೆಕ. 3:2:“ಕರ್ತನು ನಿನ್ನನ್ನು ಗದರಿಸಲಿ” ಎಂದನು.
10ಆದರೆ ಈ ಜನರು 1:10 2 ಪೇತ್ರ. 2:12:ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11ಅವರ ಗತಿಯನ್ನು ಏನೆಂದು ಹೇಳಲಿ? ಇವರು 1:11 ಆದಿ 4:5-8:ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ 1:11 ಅರಣ್ಯ 31:15, 16; 2 ಪೇತ್ರ. 2:15:ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, 1:11 ಅರಣ್ಯ 16:1-35:ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
12ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, 1:12 ಅಥವಾ, ಕಳಂಕಕ್ಕೆ ಕಾರಣರಾಗಿದ್ದು. ನಿಮ್ಮ 1:12 2 ಪೇತ್ರ. 2:13:ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. 1:12 ಯೆಹೆ. 34:2, 8, 10:ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು 1:12 ಎಫೆ 4:14; ಇಬ್ರಿ. 13:9:ಗಾಳಿಯಿಂದ ಬಡಿಸಿಕೊಂಡು ಹೋಗುವ 1:12 2 ಪೇತ್ರ. 2:17:ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, 1:12 ಎರಡು ಸಾರಿ ಸತ್ತ. ಸಂಪೂರ್ಣವಾಗಿ ಸತ್ತ, 1:12 ಮತ್ತಾ 15:13:ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.
131:13 ಫಿಲಿ. 3:19:ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ 1:13 ಯೆಶಾ 57:20:ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ 1:13 2 ಪೇತ್ರ. 2:17:ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
14ಇಂಥವರ ವಿಷಯದಲ್ಲೇ 1:14 ಆದಿ 5:18:ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, 1:14 ಧರ್ಮೋ 33:2; ದಾನಿ. 7:10; ಜೆಕ. 14:5; ಮಾರ್ಕ 8:38; 1 ಥೆಸ. 3:13; 2 ಥೆಸ. 1:7:“ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
151:15 2 ಪೇತ್ರ. 2:5:ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
16ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, 1:16 2 ಪೇತ್ರ. 2:10:ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, 1:16 2 ಪೇತ್ರ. 2:18:ಬಂಡಾಯಿಕೊಚ್ಚಿಕೊಳ್ಳುವವರು, 1:16 ಯಾಜ 19:5; ಧರ್ಮೋ 10:17:ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
17ಪ್ರಿಯರೇ, 1:17 2 ಪೇತ್ರ. 3:2:ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
181:18 2 ಪೇತ್ರ. 3:3:“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, 1:19 1 ಕೊರಿ 2:14:ಪ್ರಾಕೃತ ಮನುಷ್ಯರೂ, 1:19 ರೋಮಾ. 8:9; ಫಿಲಿ. 3:3:ದೇವರಾತ್ಮ ಇಲ್ಲದವರೂ ಆಗಿದ್ದಾರೆ.
20ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ 1:20 ಕೊಲೊ 2:7:ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, 1:20 ಎಫೆ 6:18; ರೋಮಾ. 8:26:ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.
211:21 ತೀತ. 2:13; 2 ಪೇತ್ರ. 3:12:ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, 1:21 2 ಕೊರಿ 13:14; ಅ. ಕೃ. 13:43ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,
231:23 ಆಮೋ. 4:1; ಜೆಕ. 3:2:ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು 1:23 2 ಕೊರಿ 5:11:ಭಯಪಡುತ್ತಾ ಕರುಣಿಸಿರಿ. 1:23 ಪ್ರಕ 3:4; ಜೆಕ. 3:4:ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
24ಮುಗ್ಗರಿಸದಂತೆ 1:24 ಯೋಹಾ 17:12:ನಿಮ್ಮನ್ನು ಕಾಪಾಡಿಕೊಳ್ಳುತ್ತಾ, 1:24 ಕೊಲೊ 1:22; 1 ಪೇತ್ರ. 4:13:ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು 1:24 ಎಫೆ 1:4; 5:27; ಫಿಲಿ. 2, 15; ಪ್ರಕ 14:5:ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ 1:24 ರೋಮಾ. 16:25; ಎಫೆ 3:20:ಶಕ್ತನಾಗಿರುವ,
25ನಮ್ಮ ರಕ್ಷಕನಾದ 1:25 ಯೋಹಾ 5:44; 1 ತಿಮೊ. 1:17:ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, 1:25 ರೋಮಾ. 11:36:ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.