1ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,
2ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
3ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ,
4ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು,
5ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ!
6ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
7ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು;
8ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ,
9ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
10ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
11ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
12ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
13ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು;
14ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು;
15ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು