We Believe JesusFé, Esperança e Nova Vida

ಯೆರೆ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 9 ಯೆರೆ ಯೆರೆ 11 →

1ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;

2ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.

3ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.

4ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.

5ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು;

6ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.

7ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

8ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

9ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ.

10ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ.

11ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.

12ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

13ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ.

14ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು.

15ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

16ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು.

17ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.

18“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು,

19ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.

20ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ.

21ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ.

22ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.

23ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು.

24ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ.

25ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.

← ಯೆರೆ 9 ಯೆರೆ ಯೆರೆ 11 →

ಯೆರೆ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ