1ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ.
2ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ,
3ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ,
4ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ.
5ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು,
6ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು.
7ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
8ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
9ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ;
10ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು,
11ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು.
12ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
13ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು.
14ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.
15ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
16ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ.
17ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
18ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ.
19ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ17:19 ಸಾಮಾನ್ಯ ಜನರ ಬಾಗಿಲಿನಲ್ಲಿಯೂ ಬೆನ್ಯಾಮೀನನ ಬಾಗಿಲು., ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
20‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
21ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
22ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
23ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
24ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
25ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
26ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ17:26 ದಕ್ಷಿಣಪ್ರಾಂತ್ಯ ನೆಗೆವ್. ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
27ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.