We Believe JesusFé, Esperança e Nova Vida

ಯೆರೆ 20

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 19 ಯೆರೆ ಯೆರೆ 21 →

1ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.

2ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.

3ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್20:3 ಪಷ್ಹೂರ್ ಅಂದರೆ ಬಿಡುಗಡೆ. ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್20:3 ಮಾಗೋರ್ ಮಿಸ್ಸಾಬೀಬ್ ಅಂದರೆ ಎಲ್ಲೆಡೆ ಭಯ. ಎಂದು ಹೇಳಿದ್ದಾನೆ.

4ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

5ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.

6ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.

7ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ;

8ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ.

9“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ,

10“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ.

11ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು.

12ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ,

13ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

14ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!

15“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!

16ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ.

17ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.

18ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

← ಯೆರೆ 19 ಯೆರೆ ಯೆರೆ 21 →

ಯೆರೆ 20 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ