We Believe JesusFé, Esperança e Nova Vida

ಯೆರೆ 30

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 29 ಯೆರೆ ಯೆರೆ 31 →

1ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,

2“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.

3ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.

4ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,

5“ಯೆಹೋವನು ಇಂತೆನ್ನುತ್ತಾನೆ,

6ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ?

7ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ,

8ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.

9ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”

10ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ!

11ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ;

12ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.

13ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.

14ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು.

15ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ?

16ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು.

17ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ,

18ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು.

19ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು.

20ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು,

21ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು.

22ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

23ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ;

24ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು,

← ಯೆರೆ 29 ಯೆರೆ ಯೆರೆ 31 →

ಯೆರೆ 30 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ