We Believe JesusFé, Esperança e Nova Vida

ಯೆರೆ 31

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 30 ಯೆರೆ ಯೆರೆ 32 →

1ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.

2ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು;

3‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

4ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು.

5ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.

6ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.

7ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ.

8ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು.

9ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು.

10ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ,

11ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.

12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು.

13ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು;

14ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು;

15ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ,

16ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ.

17ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

18ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು.

19ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು31:19 ತೊಡೆಯನ್ನು ಬಡಿದುಕೊಂಡೆನು ಎದೆಯನ್ನು ಬಡಿದುಕೊಂಡೆನು.

20ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ?

21ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ;

22ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ?

23ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

24ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.

25ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.

26ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.

27ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.

28ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

29‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.

30ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು” ಎಂದು ಹೇಳುತ್ತಾನೆ.

31ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

32ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

33ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

34ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

35ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ,

36“ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ,

37ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ,

38ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.

39ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.

40ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.

← ಯೆರೆ 30 ಯೆರೆ ಯೆರೆ 32 →

ಯೆರೆ 31 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ