We Believe JesusFé, Esperança e Nova Vida

ಯೆರೆ 47

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 46 ಯೆರೆ ಯೆರೆ 48 →

1ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.

2ಯೆಹೋವನು ಇಂತೆನ್ನುತ್ತಾನೆ,

3ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ,

4ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು;

5“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?

6ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!

7ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”

← ಯೆರೆ 46 ಯೆರೆ ಯೆರೆ 48 →

ಯೆರೆ 47 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ