1ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ,
2ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು,
3“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು,
4‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ,
5ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ,
6ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
8ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ;
9ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ;
10ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು;
11ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ,
13ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ.
14ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,
15ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ,
17ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು;
18ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ
19ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ
20ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
21ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು;
23ದಮಸ್ಕವನ್ನು ಕುರಿತದ್ದು,
24ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
26ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು,
28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು.
29“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು.
30ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ,
31ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
32ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು;
33ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು;
34ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ,
37ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು;
38ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”