We Believe JesusFé, Esperança e Nova Vida

ಯೆರೆ 50

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 49 ಯೆರೆ ಯೆರೆ 51 →

1ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

2“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ,

3ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು,

4ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ

5ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ,

6ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ;

7ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ,

8ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.

9ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು;

10ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.

11“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ,

12ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು;

13ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು;

14ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ,

15ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು.

16ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ;

17ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ;

18ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,

19ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು;

20ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ;

21ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ,

22ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.

23ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು!

24ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ;

25ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು;

26ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ;

27ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ!

28ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ!

29ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ;

30ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು,

31ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ;

32ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು;

33ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

34ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ;

35ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ!

36ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು.

37ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ!

38ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು.

39ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು;

40ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ,

41ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.

42ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು;

43ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು,

44ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು;

45ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,

46ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ,

← ಯೆರೆ 49 ಯೆರೆ ಯೆರೆ 51 →

ಯೆರೆ 50 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ