We Believe JesusFé, Esperança e Nova Vida

ಯೆರೆ 51

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 50 ಯೆರೆ ಯೆರೆ 52 →

1ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ51:1 ಲೇಬ್ ಕಾಮೈ ಕಸ್ಧೀಯರ ಅಥವಾ ಕಲ್ದೀಯರ ದೇಶದ ರಹಸ್ಯವಾದ ಹೆಸರು. ದೇಶದವರ ಮೇಲೂ ನಾಶನದ ಗಾಳಿಯನ್ನು51:1 ನಾಶನದ ಗಾಳಿಯನ್ನು ನಾಶನದ ಆತ್ಮವನ್ನು. ಬೀಸಮಾಡುವೆನು.

2ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು.

3ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ.

4ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.

5ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ,

6ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ.

7ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು;

8ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ;

9ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ;

10ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ;

11ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ,

12ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ,

13ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ,

14ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು,

15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ

16ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ;

17ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ;

18ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ;

19ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು;

20ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು,

21ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ;

22ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ;

23ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ;

24ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ,

25ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ;

26ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು,

27“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ,

28ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು,

29ದೇಶವೆಲ್ಲಾ ನೊಂದು ನಡುಗುತ್ತದೆ;

30ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ;

31ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ,

32ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”

33ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,

34ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ,

35ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ;

36ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು;

37ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು;

38ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.

39ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು,

40“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.

41ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!

42ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.

43ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ.

44ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ,

45ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.

46ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ;

47ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ.

48ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು;

49“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ,

50ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ;

51ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು,

52ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ;

53ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ,

54“ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!

55ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;

56ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ,

57ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು,

58ಸೇನಾಧೀಶ್ವರನಾದ ಯೆಹೋವನು,

59ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ

60ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.

61ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,

62‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.

63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,

64ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

← ಯೆರೆ 50 ಯೆರೆ ಯೆರೆ 52 →

ಯೆರೆ 51 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ