1ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ,
2ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ.
3ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು,
4ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ,
5ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ!
6ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ,
7ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ?
8ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ?
9ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ?
10ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
11ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ?
12ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ;
13ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು,
14ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು,
15ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ,
16ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ,
17ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.
18ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ;
19ನನಗೆ ಪ್ರತಿವಾದಿ ಇದ್ದಾನೋ?
20ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು.
21ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು,
22ಆಗ ನೀನು ಕರೆದರೆ ನಾನು ಉತ್ತರಕೊಡುವೆನು,
23ನನ್ನ ಪಾಪದೋಷಗಳೆಷ್ಟು?
24ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ?
25ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ?
26ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು,
27ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ;
28ಕೊಳೆಯುವ ಪದಾರ್ಥದಂತೆಯೂ,