1ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,
2“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ?
3ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ?
4ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ,
5ಹೇಗಾದರೂ ದುಷ್ಟನ ದೀಪವು ಆರುವುದು,
6ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು,
7ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು,
8ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು,
9ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು,
10ನೆಲದ ಮೇಲೆ ಪಾಶವೂ,
11ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ;
12ಅವನ ಬಲವು ಕುಂದಿಹೋಗುವುದು.
13ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು,
14ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು,
15ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು,
16ಅವನ ವಂಶವೃಕ್ಷದ ಬೇರುಗಳು ಒಣಗುವುದು,
17ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು,
18ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ,
19ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ.
20ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು,
21ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ.