1“ಬೆಳ್ಳಿ ಸಿಕ್ಕುವ ಗಣಿಯೂ,
2ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು,
3ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ,
4ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು,
5ಭೂಮಿಯು ಅನ್ನವನ್ನು ಕೊಡುವುದು,
6ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು,
7ಆ ದಾರಿಯು ಯಾವ ಹದ್ದಿಗೂ ತಿಳಿಯದು,
8ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ,
9ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
10ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು;
11ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ,
12ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
13ಅದರ ಕ್ರಯವು ಯಾರಿಗೂ ಗೊತ್ತಿಲ್ಲ,
14ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು,
15ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ,
16ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ,
17ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ?
18ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ.
19ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ,
20ಹೀಗಿರಲು ಜ್ಞಾನವು ಎಲ್ಲಿಂದ ಬರುವುದು?
21ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ,
22ನಾಶನವೂ28:22 ನಾಶನವೂ ಅಥವಾ ಅಬ್ಬದೋನ್ ಅಂದರೆ ಅಧೋಲೋಕ., ಮೃತ್ಯುವೂ,
23ಅದರ ಮಾರ್ಗವನ್ನು ಬಲ್ಲವನು ದೇವರೇ;
24ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ
25ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ
26ಮಳೆಗೆ ಕಟ್ಟಳೆಯನ್ನೂ,
27ಜ್ಞಾನವನ್ನು ಕಂಡು ಲಕ್ಷಿಸಿದನು,
28ಆಮೇಲೆ ಮನುಷ್ಯರಿಗೆ,