1ಆ ಮೇಲೆ ಯೋಬನು ಮತ್ತೆ ಇಂತೆಂದನು,
2“ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು;
3ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು
4ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ;
5ಕಾಡುಕತ್ತೆಗೆ ಹುಲ್ಲಿರಲು ಅರಚೀತೇ?
6ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ?
7ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.
8ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ,
9ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ,
10ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು.
11ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ?
12ನನ್ನ ಬಲವು ಕಲ್ಲಿನ ಬಲವೋ?
13ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ,
14ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ;
15ನನ್ನ ಸಹೋದರರಾದರೋ ತೊರೆಯ ಹಾಗೂ,
16ಹಿಮವು ಅಡಗಿರುವ ಪ್ರವಾಹಗಳು,
17ಬೇಸಿಗೆ ಬರುತ್ತಲೇ ಮಾಯವಾಗುವವು,
18ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ,
19ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು,
20ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.
21ಈಗ ನೀವು ಹಾಗೆಯೇ ಇದ್ದೀರಿ.
22ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನವಿಸಿದೆನೋ?
23ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡೆನೋ?
24ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ,
25ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ,
26ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ?
27ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು;
28ಆದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ,
29ದಯವಿಟ್ಟು6:29 ದಯವಿಟ್ಟು ಅನೇಕ ಸಾಂಪ್ರದಾಯಿಕ ಭಾಷಾಂತರಗಳಲ್ಲಿ “ಹಿಂದಿರುಗಿರಿ” ಎಂಬ ಅಕ್ಷರಶಃವಾದ ಭಾಷಾಂತರವಿದೆ, ಯೋಬ. 6:29, ಮೂವರು ಸ್ನೇಹಿತರು ಯೋಬನಿಂದ ದೂರ ಹೋಗುತ್ತಿದ್ದರು ಮತ್ತು ಅವನು ಅವರನ್ನು ಹಿಂದಿರುಗಿ ಕರೆದನು ಎಂಬ ಅಭಿಪ್ರಾಯವನ್ನು ಇದು ನೀಡುತ್ತದೆ; ಇಲ್ಲಿರುವ ಈ ಪದಕ್ಕೆ “ದಯವಿಟ್ಟು, ಮತ್ತೊಮ್ಮೆ ಯೋಚಿಸಿರಿ, ಪುನಃ ಅದನ್ನು ಯೋಚಿಸಿರಿ” ಎಂಬರ್ಥವಿದೆ. ನನ್ನ ವಿಚಾರಣೆಗೆ
30ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ?