1ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ!
2ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ;
3ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ;
4ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ;
5ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ,
6ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
7ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ.
8ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
9ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ.
10ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ
11ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ,
12ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು
13ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ;
14ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ;
15ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ.
16ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ
17ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು
18ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ;
19ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು,
20ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ.
21ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ;
22ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ;