1ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ!
2ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ,
3ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ,
4ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು,
5ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ;
6ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ;
7ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು,
8ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ;
9ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ;
10ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ;
11ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ,
12ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು,
13ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ,
14ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ;
15ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು,
16ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ,
17ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ,
18ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ;
19ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ,
20ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು,
21ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ,
22ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು2:22 ಅಥವಾ ಶತ್ರುಗಳನ್ನು. ನನ್ನ ಸುತ್ತುಮುತ್ತಲು ಕರೆಯಿಸಿದ್ದೀ;