We Believe JesusFé, Esperança e Nova Vida

ಪ್ರಲಾ 4

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಲಾ 3 ಪ್ರಲಾ ಪ್ರಲಾ 5 →

1ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ!

2ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು,

3ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ;

4ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ.

5ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ;

6ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ,

7ಆ ಪ್ರಜೆಯಲ್ಲಿನ ಮಹನೀಯರು4:7 ಮಹನೀಯರು ಮೂಲತಃ ನಜರೇಟ್ಸ್ ಅಥವಾ ನಾಜೀರರು ದ್ರಾಕ್ಷಾರಸವನ್ನು ಕುಡಿಯದಿರಲು, ಮೃತ ದೇಹವನ್ನು ಸ್ಪರ್ಶಿಸದಿರಲು, ಮತ್ತು ಅವನ ಕೂದಲನ್ನು ಉದ್ದವಾಗಿ ಬೆಳೆಯಲು ಬಿಡಲು ವಿಶೇಷ ಶಪಥ ತೆಗೆದುಕೊಂಡವರು. ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು.

8ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು.

9ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು.

10ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ;

11ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ;

12ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು

13ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.

14ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ,

15ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ.

16ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ.

17ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು.

18ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು;

19ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.

20ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ,

21ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು;

22ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು.

← ಪ್ರಲಾ 3 ಪ್ರಲಾ ಪ್ರಲಾ 5 →

ಪ್ರಲಾ 4 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ