We Believe JesusFé, Esperança e Nova Vida

ಮಾರ್ಕ 7

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಮಾರ್ಕ 6 ಮಾರ್ಕ ಮಾರ್ಕ 8 →

1ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.

2ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.

3ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.

4ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು 7:4 ಕೆಲವು ಪ್ರತಿಗಳಲ್ಲಿ ಸ್ನಾನಮಾಡು ಎಂದು ಬರೆದಿದೆ. ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.

5ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.

6ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:

7ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ

8ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.

9ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ 7:9 ಲೂಕ 7:30; ಯೋಹಾ 12:48:ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

10‘ನಿನ್ನ 7:10 ವಿಮೋ 20:12:ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು 7:10 ವಿಮೋ 21:17:‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.

11ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ

12ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.

13ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.

14ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.

15ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.

16“7:16 16 ನೆಯ ವಚನವು ಮೂಲಗ್ರಂಥದ ಹೆಚ್ಚು ಪ್ರತಿಗಳಲ್ಲಿ ಇಲ್ಲ. ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.

17ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು

18ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,

19ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.

20ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;

21ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,

22ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.

23ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”

24ಯೇಸು ಅಲ್ಲಿಂದ ಹೊರಟು 7:24 ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.

25ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.

26ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

27ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.

28ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು

29ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.

30ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.

31ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.

32ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

33ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,

34ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.

35ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.

36ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.

377:37 ಮಾರ್ಕ 6:51; 10:26; ಮತ್ತಾ 15:30, 31:ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

← ಮಾರ್ಕ 6 ಮಾರ್ಕ ಮಾರ್ಕ 8 →

ಮಾರ್ಕ 7 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ