We Believe JesusFé, Esperança e Nova Vida

ತೀತ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ತೀತ 1 ತೀತ ತೀತ 3 →

1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.

2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.

3ಹಾಗೆಯೇ, ವೃದ್ಧ ಸ್ತ್ರೀಯರು 2:3 1 ತಿಮೊ. 3:11ಚಾಡಿಹೇಳುವವರೂ 2:3 1 ತಿಮೊ. 3:8; 5:2ಮದ್ಯಕ್ಕೆ ಅಧೀನರು ಆಗಿರದೆ 2:3 1 ತಿಮೊ. 2:9ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.

4ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, 2:4 1 ತಿಮೊ. 6:1ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ

52:5 1 ತಿಮೊ. 5:14 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ 2:5 ಆದಿ 3:16ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.

6ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು2:6 1 ತಿಮೊ 5:1.

7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ 2:7 2 ಕೊರಿ 11:3ಸತ್ಯವೂ 2:7 1 ತಿಮೊ 2:2ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ 2:7 1 ತಿಮೊ 6:3ಸುಬುದ್ಧಿಯೂ ಇರಬೇಕು;

82:8 ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.

92:9 1 ಪೇತ್ರ 2:18; ಕೊಲೊ 3:22 ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,

10ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ 2:10 ಮತ್ತಾ 5:16; ಫಿಲಿ 2:15ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

11ಏಕೆಂದರೆ 2:11 1 ತಿಮೊ 2:4ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು 2:11 ತೀತ 3:4ಪ್ರತ್ಯಕ್ಷವಾಯಿತು;

12ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ 2:12 ತೀತ 1:2ನಿರೀಕ್ಷೆಯನ್ನು,

13ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

142:14 ಕೀರ್ತ 130:8; 1 ಪೇತ್ರ 1:18-19ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ 2:14 ತೀತ 3:8; ಎಫೆ 2:10 ಸತ್ಕ್ರಿಯೆಗಳಲ್ಲಿ ಆಸಕ್ತರಾದ 2:14 ಯೆಹೆ 37:23; ವಿಮೋ 19:5ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ 2:14 1 ತಿಮೊ 2:6ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

15ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ 2:15 ತೀತ 1:13; 1 ತಿಮೊ 5:20ಖಂಡಿಸುತ್ತಾ ಇರು. 2:15 1 ತಿಮೊ 4:12ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

← ತೀತ 1 ತೀತ ತೀತ 3 →

ತೀತ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ