We Believe JesusFé, Esperança e Nova Vida

ತೀತ 3

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ತೀತ 2 ತೀತ

1ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,

2ಯಾರನ್ನೂ ದೂಷಿಸದೆ, 3:2 1 ತಿಮೊ 3:3ಕುತರ್ಕ ಮಾಡದೆ 3:2 2 ತಿಮೊ 2:25ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

33:3 1 ಕೊರಿ 6:11ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

4ಆದರೆ ನಮ್ಮ ರಕ್ಷಕನಾದ ದೇವರ 3:4 ರೋಮಾ 2:4ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,

53:5 ರೋಮಾ 3:27ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ 3:5 ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ 3:5 ರೋಮಾ 12:2ನವೀಕರಣದ ಮೂಲಕವಾಗಿಯೂ ಆತನು 3:5 ಎಫೆ 2:4; 1 ಪೇತ್ರ 1:3ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

63:8 1 ತಿಮೊ. 1:15ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.

7ಆದರೆ ಬುದ್ಧಿಯಿಲ್ಲದ 3:9 1 ತಿಮೊ. 6:4ತರ್ಕಗಳಿಂದಲೂ, 3:9 1 ತಿಮೊ. 1:4ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; 3:9 2 ತಿಮೊ 2:14ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

8ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು 3:10 ಮತ್ತಾ 18:15. 2 ಥೆಸ 3:15; ಯಾಕೋಬ 5:19ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;

9ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.

10ನಾನು 3:12 2 ತಿಮೊ. 4:10ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ 3:12 2 ತಿಮೊ. 4:12ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.

11ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು 3:13 ಅ. ಕೃ 18:24ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.

12ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

13ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು.

← ತೀತ 2 ತೀತ

ತೀತ 3 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ