We Believe JesusFé, Esperança e Nova Vida

ಇಬ್ರಿ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಇಬ್ರಿ 12 ಇಬ್ರಿ

1ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.

2ಅತಿಥಿ 13:2 ಮತ್ತಾ 25:35; 1 ಪೇತ್ರ. 4:9:ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ 13:2 ಆದಿ 18:3; 19:2:ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

3ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು 13:3 ಮೂಲ: ನೀವೂ ದೇಹದಲ್ಲಿದ್ದೀರೆಂದು. ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, 13:3 ಇಬ್ರಿ. 10:34; ಮತ್ತಾ 25:36:ಅವರನ್ನು ಜ್ಞಾಪಕಮಾಡಿಕೊಳ್ಳಿರಿ.

4ಎಲ್ಲರೂ 13:4 1 ಕೊರಿ 7:38; 1 ತಿಮೊ. 4:3:ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು 13:4 ಮೂಲ: ಹಾಸಿಗೆಯು. ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ 13:4 1 ಕೊರಿ 6:9:ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

513:5 1 ತಿಮೊ. 3:3:ಹಣದಾಸೆಯಿಂದ ದೂರವಿರಿ. 13:5 1 ತಿಮೊ. 6:6,7,8; ಫಿಲಿ. 4:11; ಮತ್ತಾ 6:25:ನಿಮಗಿರುವವುಗಳಲ್ಲಿ ತೃಪ್ತರಾಗಿರಿ. 13:5 ಯೆಹೋ. 1:5; ಧರ್ಮೋ 31:6,8:“ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

6ಆದ್ದರಿಂದ, 13:6 ಕೀರ್ತ 118:6; 27:1:“ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, 13:6 ಕೀರ್ತ 56:4,11:ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ 13:7 ಇಬ್ರಿ. 13:17,24:ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು 13:7 ಇಬ್ರಿ. 6:12:ಅವರ ನಂಬಿಕೆಯನ್ನು ಅನುಸರಿಸಿರಿ.

8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

913:9 ಎಫೆ 4:14:ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. 13:9 ಕೊಲೊ 2:16:ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.

10ನಮಗೊಂದು ಯಜ್ಞವೇದಿ ಉಂಟು 13:10 1 ಕೊರಿ 9:13; 10:18:ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.

11ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ 13:11 ವಿಮೋ 29:14; ಯಾಜ 16:27:ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.

12ಅದರಂತೆ ಯೇಸು ಕೂಡ 13:12 ಇಬ್ರಿ. 9:12:ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ 13:12 ಮತ್ತಾ 21:39; ಯೋಹಾ 19:17,20; ಅ. ಕೃ. 7:58:ಪಟ್ಟಣದ ಹೊರಗೆ ಸತ್ತನು.

13ಆದ್ದರಿಂದ ನಾವು 13:13 ಇಬ್ರಿ. 11:26; 1 ಪೇತ್ರ. 4:14:ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.

14ಏಕೆಂದರೆ 13:14 ಇಬ್ರಿ. 11:10,16; ಎಫೆ 2:19; ಫಿಲಿ. 3:20:ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

15ಆದ್ದರಿಂದ 13:15 ಎಫೆ 5:20:ಯೇಸುವಿನ ಮೂಲಕವಾಗಿಯೇ ದೇವರಿಗೆ 13:15 ಯಾಜ 7:12; ಕೀರ್ತ 107:22; 116:17:ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, 13:15 ಯೆಶಾ 57:19; ಹೋಶೇ. 14:2; ಕೀರ್ತ 119:108:ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

16ಇದಲ್ಲದೆ ಪರೋಪಕಾರ ಮಾಡುವುದನ್ನು, 13:16 ರೋಮಾ. 12:13:ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. 13:16 ಮೀಕ. 6:7,8; ಫಿಲಿ. 4:18:ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು 13:17 ಯೆರೆ 13:20; ಯೆಹೆ. 34:10:ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು 13:17 ಯೆಹೆ. 3:17:ಕಾಯುವವರಾಗಿದ್ದಾರೆ. 13:17 ಅ. ಕೃ. 20:24,31:ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ 13:19 ಫಿಲೆ. 22:ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.

20ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 13:22 1 ಪೇತ್ರ. 3:12:ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.

21ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

22ನಿಮ್ಮ 13:24 ಇಬ್ರಿ. 13:7,17:ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

23ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

← ಇಬ್ರಿ 12 ಇಬ್ರಿ

ಇಬ್ರಿ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ