1ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ 3:1 ಎಫೆ 4:1; ಫಿಲಿ. 3:14; 2 ತಿಮೊ. 1:9:ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ 3:1 ಯೋಹಾ 20:21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
4ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ 3:4 ಎಫೆ 2:10; 3:9:ಸಮಸ್ತವನ್ನು ಕಟ್ಟಿದಾತನು ದೇವರೇ.
5ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ 3:5 ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3:ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ 3:5 ಧರ್ಮೋ 18:15,18,19:ಸಾಕ್ಷಿಕೊಟ್ಟಿದ್ದಾನೇ.
6ಆದರೆ ಕ್ರಿಸ್ತನಾದರೋ 3:6 ಇಬ್ರಿ. 1:2:ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, 3:6 ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26:ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ 3:6 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5:ನಾವೇ ದೇವರ ಮನೆಯಾಗಿರುತ್ತೇವೆ.
7ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,
8ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ
9ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ,
10ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು,
11ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು
12ಸಹೋದರರೇ, 3:12 ಮತ್ತಾ 16:16; 2 ಕೊರಿ 3:3; 1 ತಿಮೊ. 4:10:ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
13ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ 3:13 ಯೆಶಾ 44:20; ರೋಮಾ. 7:11; ಎಫೆ 4:22:ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
14ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು 3:14 ಇಬ್ರಿ. 3:6; 10:23; 1 ಕೊರಿ 15:2:ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ 3:14 ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
15“3:15 ಕೀರ್ತ 95:7-11; ಇಬ್ರಿ. 3:7; 4:7:ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ,
16ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
17ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? 3:17 ಅರಣ್ಯ 14:29; 1 ಕೊರಿ 10:5:ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
18ನನ್ನ ವಿಶ್ರಾಂತಿಯಲ್ಲಿ 3:18 ಧರ್ಮೋ 1:34,35; ಇಬ್ರಿ. 4:2:ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
193:19 ಇಬ್ರಿ. 4:6; ಕೀರ್ತ 78:21; 106:24ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.